ರಾಯ್ಪುರ: ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ 13ಜನರು ಸಾವನ್ನಪ್ಪಿದ್ದಾರೆ(Chhattisgarh Accident) ಮತ್ತು 11 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಮತ್ತು 9 ಮಹಿಳೆಯರು ಸಾವನ್ನಪ್ಪಿದ್ದಾರೆ. ಚಟೌಡ್ ಗ್ರಾಮದ ಕುಟುಂಬವೊಂದು ಖಾಸಗಿ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ತೆರಳಿತ್ತು. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಟ್ರಕ್ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಯ್ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಅವರು ಜಿಲ್ಲಾಡಳಿತ ಅಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Road Accident: ಶ್ರೀಲಂಕಾದಲ್ಲಿ ಬಸ್ ಕಂದಕಕ್ಕೆ ಉರುಳಿ 21 ಪ್ರಯಾಣಿಕರು ಸಾವು
ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು
ಚಿತ್ರದುರ್ಗ: ಚಿತ್ರದುರ್ಗ (Chitradurga news) ಜಿಲ್ಲೆಯ ಹೊಳಲ್ಕೆರೆ ಬಳಿ ಭೀಕರ ಅಪಘಾತ (Road accident) ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವ (death) ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಮೃತರನ್ನು ಸುನೀತಾ (34), ಶ್ಯಾಂ ಬಾಬು (17), ಶಿವನಾಗಲಿ (55) ಎಂದು ಗುರುತಿಸಲಾಗಿದೆ. ಮೃತರನ್ನು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರು ಎಂದು ಗುರುತಿಸಲಾಗಿದೆ.
ಇವರು ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.