
ಧಾರವಾಡ:ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ‘ವೀರ ಸಾವರ್ಕರ್ ಜಯಂತಿಯನ್ನು ಇಂದು ಆಚರಿಸಲಾಯಿತು. ವಿದ್ಯಾರ್ಥಿಗಳಾದ ವೀರರಾಜ ಕೆ. ಹಾಗೂ ಜೈವಿನ್ ಇವರು ವೀರ ಸಾವರ್ಕರರ ಜೀವನ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದರು. ಅಧಮ್ಯ ದೇಶಪಾಂಡೆ ಸಾವರ್ಕರ ಬರೆದಿರುವ ಹಾಡೊಂದನ್ನು ಪ್ರಸ್ತುತಪಡಿಸಿದನು. ಕಾರ್ಯಕ್ರಮದಲ್ಲಿ ಉಪ ಪ್ರಾಚಾರ್ಯರಾದ ಶ್ರೀ ಕೃಷ್ಣ ಜೋಶಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.