ಚಂಡೀಗಢ: ಜಾಶ್ ಹೇಝಲ್ವುಡ್ ಸೇರಿದಂತೆ ಬೌಲರ್ಗಳ ಪರಿಣಾಮಕಾರಿ ಬೌಲಿಂಗ್ ಹಾಗೂ ಫಿಲ್ ಸಾಲ್ಟ್ ಸ್ಪೋಟಕ ಅರ್ಧಶತಕದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ (RCB vs PBKS) ಪಂಜಾಬ್ ಕಿಂಗ್ಸ್ ಎದುರು 8 ವಿಕೆಟ್ಗಳ ಸುಲಭ ಗೆಲುವು ಪಡೆಯಿತು. ಆ ಮೂಲಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಫೈನಲ್ಗೆ ಪ್ರವೇಶ ಮಾಡಿದೆ. 2009, 20211 ಹಾಗೂ 2016ರ ಬಳಿಕ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ. ಆ ಮೂಲಕ ಚೊಚ್ಚಲ ಕಪ್ ಗೆಲ್ಲುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.