
ಧಾರವಾಡ ಮೇ.30:ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಮೈಸೂರು ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿ.ವಿ.ಎ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪದವಿಯಲ್ಲಿ 3 ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗ ಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ htts;//uucms.karnataka.gov.in ಅಥವಾ https;//www.cavamysore.karnataka.gov.in ಮೂಲಕ ಜೂನ್ 10, 2025 ರೋಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕತಣೆಯಲ್ಲಿ ತಿಳಿಸಿದ್ದಾರೆ.