ನೋರಾ ಫತೇಹಿ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಅನೇಕ ಅವಮಾನಗಳನ್ನು ಎದುರಿಸಿದ್ದಾರೆ. ಅವುಗಳನ್ನೇ ಸವಾಲಾಗಿ ತೆಗೆದುಕೊಂಡು ಸಿನಿಮೋದ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಇವರು ಬಾಹುಬಲಿ ಸಿನಿಮಾದ ಮನೋಹರಿ ಐಟಂ ಸಾಂಗ್ ನಲ್ಲಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕದಿದ್ದರು. ಟೆಂಪರ್, ಕಿಕ್ 2, ಲೋಫರ್ ಮತ್ತು ಊಪಿರಿ ಸೇರಿದಂತೆ ಅನೇಕ ಸಿನಿಮಾದಲ್ಲಿ ನಟಿಸಿದ್ದ ನೋರಾ ಫತೇಹಿಗೆ ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಫ್ಯಾನ್ ಫಾಲೋವರ್ಸ್ ಕೂಡ ಇದೆ.