ಲೀಡ್ಸ್: ಇಂಗ್ಲೆಂಡ್ (England) ವಿರುದ್ಧ ಇಲ್ಲಿನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಟೆಸ್ಟ್ ಸರಣಿಯ(IND vs ENG) ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಹಿರಿಯ ಬ್ಯಾಟ್ಸ್ಮನ್ ಕೆಎಲ್ ರಾಹುಲ್ (KL Rahul) ಶತಕವನ್ನು ಬಾರಿಸಿದ್ದಾರೆ. ಈ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ 42 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ರಾಹುಲ್, ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ. ಆದರೆ, ದ್ವಿತೀಯ ಇನಿಂಗ್ಸ್ನಲ್ಲಿ ಬಹಳ ಎಚ್ಚರಿಕೆಯಿಂದ ಬ್ಯಾಟ್ ಮಾಡಿ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 9ನೇ ಶತಕ ಹಾಗೂ ಇಂಗ್ಲೆಂಡ್ನಲ್ಲಿ ಮೂರನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಭಾರತ ತಂಡದ ಮೊತ್ತ 250ರ ಗಡಿ ದಾಟಿಸಲು ನೆರವು ನೀಡಿದ್ದಾರೆ.