ಗೌರಿಬಿದನೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ರಾಜ್ಯದಲ್ಲಿ ಸಂಗ್ರಹವಾಗುವ ತೆರಿಗೆ ಹಣದಲ್ಲಿ ಶೇಕಡ ಎಪ್ಪತ್ತರಷ್ಟು ತೆರಿಗೆ ಹಣ ಬೆಂಗಳೂರಿನಿಂದಲೇ ಸಂಗ್ರಹ ವಾಗುತ್ತಿದ್ದು, ಈ ಮೂಲಕ ರಾಜ್ಯದ ಅಭಿವೃದ್ಧಿಗೆ ಬೆಂಗಳೂರು ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರು ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸ ಲಾಗಿದ್ದ ಸರಳ ನಾಡ ಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಬೃಹತ್ ಜಾಥ
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ನಿರ್ಮಾಣವಾದ ಬೆಂಗಳೂರು ಇಂದು ವಿಶ್ವ ದಲ್ಲಿಯೇ ಬೃಹತ್ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ ಎಂದ ಅವರು ಶತಮಾನಗಳ ಹಿಂದೆಯೇ ಕೆಂಪೇಗೌಡರು ಬೆಂಗಳೂರನ್ನು ಸುಸಜ್ಜಿತವಾಗಿ ನಿರ್ಮಿಸಿ ಎಲ್ಲಾ ಜಾತಿ ಜನಾಂಗದವರಿಗೂ ಪ್ರಾತಿ ನಿಧ್ಯವನ್ನು ನೀಡಿದ್ದರು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ್ ಎಸ್ ಪತ್ರಿ, ಮಾಜಿ ಶಾಸಕಿ ಎನ್ ಜ್ಯೋತಿ ರೆಡ್ಡಿ, ನಗರ ಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷ ಫರೀದ್, ತಾ.ಪಂ ಇಓ ಜಿಕೆ ಹೊನ್ನಯ್ಯ, ನಗರಸಭೆ ಆಯುಕತ್ತೆ ಗೀತಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರಾಮರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ನಗರಸಭೆ ಸದಸ್ಯ ಮಾರ್ಕೆಟ್ ಮೋಹನ್ ಹಾಗೂ ಇನ್ನಿತರರು ಉಪಸ್ಥಿತ ರಿದ್ದರು.