ನವದೆಹಲಿ: ಎರಡು ವರ್ಷಗಳ ಹಿಂದೆ ಸಂಸತ್ನಲ್ಲಿ ಸ್ಮೋಕ್ ಕ್ಯಾನ್ ಸಿಡಿಸಿ(Parliament Security Breach) ಕೆಲ ಕಾಲ ಆತಂಕ ಸೃಷ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಆರೋಪಿಗಳಿಬ್ಬರಿಗೆ ಇಂದು ಜಾಮೀನು ಮಂಜೂರು ಮಾಡಿದೆ. 50,000ರೂ. ದಂಡ ವಿಧಿಸುವ ಮೂಲಕ ಕೋರ್ಟ್ ಇಬ್ಬರು ಆರೋಪಿಗಳಾದ ನೀಲಂ ಆಜಾದ್ ಮತ್ತು ಮಹೇಶ್ ಕುಮಾವತ್ಗೆ ಷರತ್ತುಬದ್ಧ ಜಾಮೀನು ಜಾರಿಗೊಳಿಸಿದೆ.
ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ, ನೀಲಂ ಆಜಾದ್ ಮತ್ತು ಮಹೇಶ್ ಕುಮಾವತ್ ಮಾಧ್ಯಮಗಳಿಗೆ ಯಾವುದೇ ಸಂದರ್ಶನಗಳನ್ನು ನೀಡಬಾರದು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಏನನ್ನೂ ಪೋಸ್ಟ್ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಹೇಳಿದೆ. ಅಲ್ಲದೇ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಪೊಲೀಸರ ಮುಂದೆ ಹಾಜರಾಗುವಂತೆ ನ್ಯಾಯಾಲಯವು ಆರೋಪಿಗಳಿಗೆ ಸೂಚಿಸಿದೆ.
ಈ ಸುದ್ದಿಯನ್ನೂ ಓದಿ: ಪ್ರಧಾನಿ ಭದ್ರತಾ ವೈಫಲ್ಯ ಪ್ರಕರಣಕ್ಕೆ ಎಸ್ಪಿ ಲೋಪವೇ ಕಾರಣ
ಮೇ 21 ರಂದು, ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ನೀಲಂ ಆಜಾದ್ ಮತ್ತು ಮಹೇಶ್ ಕುಮಾವತ್ ಅವರ ಜಾಮೀನು ಅರ್ಜಿಗಳ ಮೇಲಿನ ಆದೇಶವನ್ನು ಕಾಯ್ದಿರಿಸಿತ್ತು. ಆರೋಪಿಗಳು ತಮ್ಮ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರು.