ಮೈಸೂರು : ಬಹು ನಿರೀಕ್ಷಿತ ಡೆವಿಲ್ ಸಿನಿಮಾದ ಚಿತ್ರೀಕರಣ ಪೂರ್ಣಗೊಳ್ಳುತ್ತಿದ್ದಂತೆ ನಟ ದರ್ಶನ್(Actor Darshan) ಮತ್ತೆ ಟೆಂಪಲ್ ರನ್ ಶುರು ಮಾಡಿದ್ದಾರೆ. ಇತ್ತೀಚೆಗೆಷ್ಟೇ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ದರ್ಶನ್ ಇದೀಗ ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಆಷಾಡ ಮಾಸ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪತ್ನಿ ಜೊತೆಗೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.