ಬರ್ಮಿಂಗ್ಹ್ಯಾಮ್: ಇಂಗ್ಲೆಂಡ್ನ ಹ್ಯಾರಿ ಬ್ರೂಕ್ (158 ರನ್) ಹಾಗೂ ಜೇಮಿ ಸ್ಮಿತ್ (184 ರನ್) ಅವರ ಅಬ್ಬರದ ಬ್ಯಾಟಿಂಗ್ ಹೊರತಾಗಿಯೂ ಮೊಹಮ್ಮದ್ ಸಿರಾಜ್ (70ಕ್ಕೆ 6) ಅವರ ಮಾರಕ ಬೌಲಿಂಗ್ ದಾಳಿಯ ಸಹಾಯದಿಂದ ಭಾರತ ತಂಡ, ಎರಡನೇ ಟೆಸ್ಟ್ ಪಂದ್ಯದಲ್ಲಿ(IND vs ENG) ದೊಡ್ಡ ಮುನ್ನಡೆಯನ್ನು ಪಡೆದಿದೆ. ಸಿರಾಜ್ (Mohammed Siraj) ಮಾರಕ ದಾಳಿ ನಲುಗಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್ನಲ್ಲಿ 407 ರನ್ಗಳಿಗೆ ಆಲ್ಔಟ್ ಆಯಿತು. ನಂತರ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಮೂರನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 64 ರನ್ ಗಳಿಸಿದೆ ಹಾಗೂ ಒಟ್ಟಾರೆ 244 ರನ್ಗಳ ಬೃಹತ್ ಮುನ್ನಡೆಯನ್ನು ಪಡೆದಿದೆ. ಇದರೊಂದಿಗೆ ಶುಭಮನ್ ಗಿಲ್ ನಾಯಕತ್ವದ ಟೀಮ್ ಇಂಡಿಯಾ (India) ಎರಡನೇ ಟೆಸ್ಟ್ ಪಂದ್ಯದಲ್ಲಿ ತಮ್ಮ ಹಿಡಿತವನ್ನು ಇನ್ನಷ್ಡು ಬಿಗಿಗೊಳಿಸಿದೆ.