
ಜು. 05:* ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ 2025-26 ನೇ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರನನ್ನು ಒಳಗೊಂಡಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರು ಇರುವುದು ಖಡ್ಡಾಯವಾಗಿದೆ.

ಕಲಾ ತಂಡಗಳ ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಮಾಜ ಕಲ್ಯಾಣ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, 2025 ರ ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಅದೇ ಆಗಸ್ಟ್ 12 ರಂದು, ನಿಗದಿತ ಸಮಯಕ್ಕೆ ಧಾರವಾಡ ಜಿಲ್ಲೆಯ ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆಯು ಧಾರವಾಡ ವಾರ್ತಾ ಇಲಾಖೆಯ ವಾರ್ತಾಭವನದಲ್ಲಿ ಜರುಗಲಿದೆ. ಆಸಕ್ತ ಅರ್ಹ ಬೀದಿ ನಾಟಕ ತಂಡಗಳು ಮತ್ತು ಜಾನಪದ ಸಂಗೀತ ಕಲಾ ತಂಡಗಳು ಆಗಸ್ಟ್ 01, 2025 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.