ಹುಬ್ಬಳ್ಳಿ: ನಿಗೂಢವಾಗಿ ಉಳಿದ ವ್ಯಕ್ತಿಯ ಅಂತ್ಯಕ್ರಿಯೆ ಯತ್ನ. ಇದು ಸಹಜವಾದ ಸಾವೋ? ಆತ್ಮಹತ್ಯೆಯೋ? ಕೊಲೆಯೋ?
ಹೌದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಬುಡರಸಿಂಗಿ ಬಳಿಯ ಪ್ರತಿಷ್ಠಿತ ಕಾಲೇಜು ಒಂದರ ಬಳಿಯಲ್ಲಿ ಅಪರಿಚಿತ ವ್ಯಕ್ತಿಯೊರ್ವ ಮಂಗಳವಾರ ಸಾವನ್ನಪ್ಪಿದ್ದಾನೆ.
ಬಳಿಕ ಈ ವ್ಯಕ್ತಿಯನ್ನು ಏಕಾಏಕಿ ಪಕ್ಕದ ಗ್ರಾಮ ಕೊಟಗೊಂಡಹುಣಸಿ ಸ್ಮಶಾನಗಟ್ಟಿಯಲ್ಲಿ ಅಂತ್ಯಸಂಸ್ಕಾರ ನೇರವೇರಿಸಲು ಮುಂದಾಗಿದ್ದಾರೆ.
ಈ ವೇಳೆ ಗ್ರಾಮಸ್ಥರು ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶವವನ್ನು ಬೇರೆಡೆ ಅಂತ್ಯ ಸಂಸ್ಕಾರ ಮಾಡಿದ್ದಾರೆಂದು ತಿಳಿದುಬಂದಿದೆ.
ಆದರೆ ಇಂದು ಶವಸಂಸ್ಕಾರಕ್ಕೆ ತಂದಿದ್ದ ಕಟ್ಟಿಗೆಯನ್ನು ಸಹ ವಾಪಾಸ್ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ಮೃತ ವ್ಯಕ್ತಿ ಯಾರು? ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ? ಏಕೆ ತರಾತುರಿಯಲ್ಲಿ ಶವಸಂಸ್ಕಾರ ಮಾಡಲು ಮುಂದಾಗಿದ್ರು? ಎಂಬ ನಾನಾ ಪ್ರಶ್ನೆಗಳು ಗ್ರಾಮಸ್ಥರನ್ನು ಕಾಡುತ್ತಿದೆ.
ಹೀಗಾಗಿ ಅಪರಿಚಿತ ವ್ಯಕ್ತಿಯ ಸಾವು ಕೊಲೆಯೋ? ಅಥವಾ ಆತ್ಮಹತ್ಯೆಯೋ? ಸಹಜವೋ? ಎಂಬ ಅನುಮಾನಕ್ಕೆ ಕಾರಣವಾಗಿದ್ದು, ಈ ಬಗ್ಗೆ ಗ್ರಾಮೀಣ ಠಾಣೆಯ ಪೊಲೀಸರ ತನಿಖೆಯ ಬಳಿಕವೇ ಸತ್ಯಾಸತ್ಯತೆ ಗೊತ್ತಾಗಬೇಕಿದೆ.