ಹುಬ್ಬಳ್ಳಿ: ಬುಡರಸಿಂಗಿ ಬಳಿಯ ಪ್ರತಿಷ್ಠಿತ ಕಾಲೇಜು ಬಳಿಯಲ್ಲಿ ಅನುಮಾನ್ಪದವಾಗಿ ಸಾವನ್ನಪ್ಪಿದ ಪ್ರಕರಣವನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ಭೇದಿಸಿದ್ದು, ಮೃತನು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಮಂಗಳವಾರ ಉಣಕಲ್ ಗ್ರಾಮದ ಸುರೇಶ ಬೆಳವಟಗಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಕಾಲಿನ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನು ವೃತ್ತಿಯಲ್ಲಿ ಈ ಹಿಂದೆ ಗೌಂಡಿ ಕೆಲಸ ಮಾಡುತ್ತಿದ್ದ, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲಿಗೆ ಗಾಯವಾಗಿದೆ.
ಬಳಿಕ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗಿದೆ. ಅದಾಗ್ಯೂ ಕೂಡಾ ಸಂಪೂರ್ಣವಾಗಿ ಕಾಲು ಗುಣಮುಖವಾಗದ ಹಿನ್ನೆಲೆಯಲ್ಲಿ, ಮಂಗಳವಾರ ನೋವು ತಾಳಲಾರದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.