ಲೋಕಸಭೆ ಟಿಕೆಟ್ ಕೊಡಿಸುವುದಾಗಿ ಹೇಳಿ ಎರೆಡು ಕೋಟಿ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರನ್ನು ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಟಿಕೆಟ್ ಕೊಡಿಸುವ ಆಮಿಷ ಒಡ್ಡಿ ಬರೋಬ್ಬರಿ ಎರೆಡು ಕೋಟಿ ಹಣವನ್ನು ಪಡೆದು ಹಿಂತಿರುಗಿಸದೆ ದೇವಾನಂದ್ ಪುಲ್ಸಿಂಗ್ ಚವ್ಹಾಣ್ ಅವರನ್ನು ವಂಚಿಸಿದರ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆತ್ಮೀಯರ ಮನೆಯಲ್ಲಿ ತಲೆಮರಿಸಿಕೊಂಡಿದ್ದ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಹಾಗೂ ಸಹೋದರಿ ವಿಜಯಲಕ್ಷ್ಮಿ ಅವರನ್ನು ಕೂಡ ಬಂದಿಸಿದಿರುವುದಾಗಿ ಮಾಹಿತಿ ಲಭ್ಯವಾಗಿದೆ.