ಹುಬ್ಬಳ್ಳಿ: ಹು-ಧಾ ನಗರ ಪೊಲೀಸ್ ಕಮೀಷನರೇಟ್ ನ ಹುಬ್ಬಳ್ಳಿ ಉತ್ತರ ವಿಭಾಗದ ಪೊಲೀಸರಿಂದ ಚೆನ್ನಮ್ಮ ಪಡೆ, ಸೈಬರ್ ಕ್ರೈಂ ಅಪರಾಧಗಳ ಜಾಗೃತಿ ಹಾಗೂ ಡ್ರಗ್ಸ್ ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ನಗರದ ವಿದ್ಯಾನಗರದ ಕಿಮ್ಸ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಹುಬ್ಬಳ್ಳಿ ಉತ್ತರ ವಿಭಾಗದ ಎಸಿಪಿ ಶಿವಪ್ರಕಾಶ್ ನಾಯ್ಕ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮೂಲದಿಂದ ಅಪರಿಚಿತ ವ್ಯಕ್ತಿಗಳು ಪರಿಚಯ ಮಾಡಿಕೊಂಡು ಬೆದರಿಕೆ ಹಾಕುವ ಪ್ರಯತ್ನಗಳು ನಡೆತ್ತಿರುತ್ತವೆ ಅದರಿಂದ ಜಾಗೃತರಾಗಿ ಎಚ್ಚೆತ್ತುಕೊಳ್ಳಬೇಕಿರುವುದು ಅತ್ಯಗತ್ಯ. ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ 112 ನಂಬರಿಗೆ ಕರೆ ಮಾಡಿದರೇ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಅಲ್ಲದೇ ಹೆಣ್ಣುಮಕ್ಕಳಿಗೆ ತೊಂದರೆವಾದಲ್ಲಿ ಚೆನ್ನಮ್ಮ ಪಡೆಗೆ ಮಾಹಿತಿ ನೀಡಬಹುದು ಎಂದರು.
ಇನ್ನೂ ಗಾಂಜಾ ಹಾಗೂ ಡ್ರಗ್ಸ್ ಸೇವನೆಯನ್ನು ಮಾಡಬಾರದೆಂದು ಸಲಹೆ ನೀಡಿದ ಅವರು, ದುಶ್ಚಟದ ಹಿಂದೆ ಹೋದರೆ ಮುಲಾಜಿಲ್ಲದೆ ಕೇಸ್ ದಾಖಲು ಮಾಡಲಾಗುವುದು ನಿಮ್ಮ ಜೀವನದ ಭವಿಷ್ಯ ಮೊಟಕುಗೊಳ್ಳಲಿದೆ ಎಂದು ಎಚ್ಚರಿಸಿದ ಅವರು, ಉತ್ತಮ ಅಭ್ಯಾಸ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಎಂದು ವೈದ್ಯಕೀಯ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಈ ವೇಳೆ ಸಿಇಎನ್ ಎಸಿಪಿ ಶಿವರಾಜ್ ಕಟಕಭಾವಿ, ಸಿಇಎನ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್, ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಜಯಂತ್ ಗೌಳಿ, ಪ್ರಾಶುಂಪಾಲರಾದ ಈಶ್ವರ ಹೊಸಮನಿ, ಕಿಮ್ಸ್ ವಾರ್ಡನ್ ಕೆ.ಎಫ್. ಕಮ್ಮಾರ, ಸೇರಿದಂತೆ ಕಿಮ್ಸ್ ವೈದ್ಯಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.