ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಬರುವ ಬ್ಯಾಹಟ್ಟಿ ಗ್ರಾಮದಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟ್ ಆಡುತ್ತಿದ್ದ ಆರು ಜನ ಆರೋಪಿಗಳನ್ನು ಬಂಧನ ಮಾಡುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆ ಪೊಲೀಸ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ಹಾಗೂ ಪಿಎಸ್ಐ ಬೆಳಗಾಂವಕರ್ ನೇತೃತ್ವದ ತಂಡ ದಾಳಿ ನಡೆಸಿ ಆರು ಜನ ಆರೋಪಿಗಳನ್ನು ಬಂಧನ ಮಾಡಿ ಅವರಿಂದ 15,000 /- ನಗದು ಹಣ ಹಾಗೂ ಒಂದು ಬೈಕ್ ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.