ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿ ಕ್ರಮ ಕೈಗೊಂಡ ಘಟನೆ ಎಪಿಎಂಸಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಅಮರಗೋಳ ಎಪಿಎಂಸಿ ಯಾರ್ಡ್ ನಲ್ಲಿ ತಿಪ್ಪಣ್ಣ ತಂದೆ ಭೀಮಪ್ಪ ಶಿಶನಳ್ಳಿ ರಾಯಪುರ ನಿವಾಸಿ 25 ವರ್ಷದ ಬಂಧಿತ ಆರೋಪಿ. ಈತ ಟಾಟಾ ಇಂಟ್ರಾ ಗೂಡ್ಸ್ ವಾಹನ ದಲ್ಲಿ ಮಾರಕಾಸ್ತ್ರವನ್ನು ಇಟ್ಟುಕೊಂಡು ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಮಿವುಲ್ಲಾ ಕೆ. ರವರ ನೇತೃತ್ವದ ತಂಡ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ವಾಹನದಲ್ಲಿ ಎರಡು ಫುಟ್ ಉದ್ಧದ ತಲವಾರ್ ಕಂಡುಬಂದಿದ್ದು, ಮಾರಕಾಸ್ತ್ರವನ್ನು ವಶಪಡಿಸಿಕೊಂಡು, ಆರೋಪಿಯನ್ನ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡದ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.