ಹುಬ್ಬಳ್ಳಿ: ವಿದ್ಯಾರ್ಥಿಯೋರ್ವ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಎಂಬಾತನೇ ನೇಣಿಗೆ ಶರಣಾದ ವಿದ್ಯಾರ್ಥಿ.
ರಾಕೇಶ್ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ನಲ್ಲಿ ವ್ಯಾಸಾಂಗ ಮಾಡುತ್ತಿದ್ದ. ತಾನು ವಾಸಿಸುತ್ತಿದ್ದ ಹಾಸ್ಟೆಲ್ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪ್ರತಿಕ್ರಿಯಿಸಿ, ರಾಕೇಶ್ ಮೊಬೈಲ್ ನಲ್ಲಿ ಆನ್ಲೈನ್ ಗೇಮ್ ಆಡುತ್ತಿದ್ದ ಹಾಗೂ ಹಣವನ್ನೂ ಕಳೆದುಕೊಂಡಿದ್ದ ಎಂಬ ಮಾಹಿತಿ ಇದ್ದು, ಈ ಬಗ್ಗೆ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಳಾಗಿದ್ದು ತನಿಖೆ ಮುಂದುವರಿದಿದೆ.