ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣವನ್ನು ಕ್ಯಾಬಿನೆಟ್\’ನಲ್ಲಿ ಸರ್ಕಾರ ವಾಪಾಸ್ ಪಡೆದ ನಿರ್ಧಾರವನ್ನು ಸ್ವಾಗತ ಮಾಡತ್ತೇನೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜಕೀಯ ಪ್ರೇರಿತದಿಂದ ಬಹಳಷ್ಟು ಜನರಿಗೆ ಅನ್ಯಾಯ ಆಗಿತ್ತು. ಅದನ್ನು ಸುದೀರ್ಘವಾಗಿ ಚರ್ಚೆ ಮಾಡಿ ಕ್ಯಾಬಿನೆಟ್\’ನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಓಲೈಕೆ ರಾಜಕೀಯ ಯಾರು ಮಾಡುತ್ತಿದ್ದಾರೆ. ಸುಖಾಸುಮ್ಮನೆ ಬಿಜೆಪಿಯವರು ಹೇಳತ್ತಾರೆ. ವಾಪಾಸ್ ಪಡೆದ 43 ಪ್ರಕರಣದಲ್ಲಿ ಅನೇಕ ಕೇಸ್\’ಗಳು ಇದೇ ತರಹ ಇದೆ. ಅದರ ಬಗ್ಗೆ ಇವರೇಕೆ ಮಾತನಾಡುತ್ತಿಲ್ಲ ಎಂದರು.
ಆರೋಪಿಗಳ ಬಂಧನದ ನಂತರ 90 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಬೇಕೆಂಬ ನಿಯಮವಿದೆ. ಆದರೆ 90 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ. ಹೀಗಾಗಿ ಬೇಲ್ ಪಡೆಯಲು ಸಾಧ್ಯವಾಗಿದೆ ಎಂದರು.
ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ಸೇಡಿನ ರಾಜಕೀಯ ಮಾಡುತ್ತಿದೆ. ಹೀಗಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.
ಪ್ರಕರಣದಲ್ಲಿ ಎಲ್ಲರೂ ಅಮಾಯಕರು ಇದ್ದಾರೆ ಎಂದು ನಾನು ಹೇಳುವುದಿಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮವಾಗಲಿ. ಆದರೆ ಬಿಜೆಪಿ ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ನಿಜವಾಗಿಯೂ ಬಿಜೆಪಿಯವರಿಗೆ ಭಯೋತ್ಪಾದಕರು, ದೇಶದಲ್ಲಿ ಜಾತಿಧರ್ಮ ಬಿಟ್ಟು ಒಗ್ಗಟ್ಟಾಗಿ ಇದ್ದರು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ಹೀಗಿದ್ದಾಗ ಇವರಿಗೆ ಪ್ರತಿಭಟನೆ ಮಾಡುವುದಕ್ಕೆ ಯಾವ ನೈತಿಕತೆಯಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.