ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ವಿನಾಯಕ ಚಿತ್ರಗಾರ (22) ಎಂಬಾತನ ಮೇಲೆಯೇ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಜುನ್ ನಗರ ಟ್ರೆಸರಿ ಫ್ಯಾಕ್ಟರಿ ಹತ್ತಿರ ಆತನ ಐದು ಜನ ಗೆಳೆಯರಾದ ಸಮೀರ್, ಇರ್ಫಾನ್, ದೀಪಕ್, ಬಾಬ್ಲೂ ಹಾಗೂ ಇನ್ನು ಕೆಲವರು ಸೇರಿಕೊಂಡು ಚಾಕು ಇರಿದಿದ್ದಾರೆಂದು ತಿಳಿದುಬಂದಿದೆ.
ಆದರೆ ವಿನಾಯಕನಿಗೆ ಯಾವ ಕಾರಣಕ್ಕೆ ಚಾಕು ಹಾಕಲಾಗಿದೆ ಎಂಬುದರ ಬಗ್ಗೆ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
ಸದ್ಯ ಗಾಯಗೊಂಡಿರುವ ವಿನಾಯಕ ಚಿತ್ರಗಾರ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇನ್ನು ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ನಿನ್ನೆ ರಾತ್ರಿ ಕಿಮ್ಸ್ ಗೆ ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ.
ಸದ್ಯ ಗಾಯಗೊಂಡಿರುವ ವಿನಾಯಕ ಸಹೋದರ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ನಡೆದ ಘಟನೆಯ ಬಗ್ಗೆ ವಿವರಣೆ ನೀಡಿದ್ದಾನೆ. ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕುತಿದ್ದಾರೆ.