ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 31 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹೌದು, ದೀಪಗಳ ಹಬ್ಬ ದೀಪಾವಳಿ ನೆಪದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜುಕೋರರು ಇಸ್ಪೀಟ್ ಆಟದಲ್ಲಿ ತೊಡಗಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಹಾಗೂ ಪಿಎಸ್ಐ ಸಚಿನ್ ಅಲಮೇಲ್ಕರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಕುಸುಗಲ್, ಅಂಚಟಗೇರಿ, ಚನ್ನಾಪುರ, ಚವರಗುಡ್ಡದಲ್ಲಿ ಒಟ್ಟು 31 ಜನರನ್ನು ಬಂಧಿಸಿ, 83 ಸಾವಿರ ನಗದು ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.