ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ.
ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್ ನಂಬರ್ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ \’ಬಾಬಾ ಸಿದ್ದಿಕಿ ಅವರಂತೆ ಕೊಲೆ ಮಾಡಲಾಗುವುದು\’ ಎಂದು ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಯುವತಿ ಫಾತಿಮಾ ಖಾನ್ ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾಳೆ. ಆದರೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯುವತಿ ಮುಂಬೈ ಬಳಿಯ ಥಾಣೆಯಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದಾಳೆ, ಆಕೆಯ ತಂದೆ ಮರದ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.