ಮಂಡ್ಯ:
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.ಸಕ್ಕರೆ ನಾಡು ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಸಮ್ಮೇಳನದ ಪ್ರಧಾನ ವೇದಿಕೆ ಮುಖ್ಯದ್ವಾರ ಮುಂಭಾಗ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರ ಧ್ವಜವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಧ್ವಜವನ್ನು ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು, ನಾಡ ಧ್ವಜವನ್ನು ಪರಿಷತ್ತಿನ ಜಿಲ್ಲಾ ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಅವರು ಧ್ವಜಾರೋಹಣ ಮಾಡಿದರು.