[ad_1]
ನವದೆಹಲಿ: ದೆಹಲಿಯ ಶಕ್ತಿ ವಿಹಾರ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ (Building Collapse) ಇದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಈ ವರೆಗೆ 14 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಕ್ಷಣವೇ ರಕ್ಷಣಾ ಕಾರ್ಯ ಪ್ರಾರಂಭಿಸಿದ್ದಾರೆ. ಸದ್ಯ ಕಟ್ಟಡದ ಕುಸಿತ ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆಗಿದೆ.
ವೈರಲ್ ಆದ ವಿಡಿಯೋದಲ್ಲಿ ಕೆಲವೇ ಸೆಕೆಂಡುಗಳಲ್ಲಿ ಕಟ್ಟಡದ ಹಠಾತ್ ಕುಸಿತವನ್ನು ಕಾಣಬಹುದು. ಮೊದಲು ಕಟ್ಟಡದ ಒಂದು ಭಾಗ ಕುಸಿಯುತ್ತದೆ. ಕೆಲವೇ ಕ್ಷಣಗಳಲ್ಲಿ ಇಡೀ ಕಟ್ಟಡದ ಕುಸಿದಿದೆ. ಕಟ್ಟಡ ನೆಲಸಮವಾಗುತ್ತಿದ್ದಂತೆ ಸುತ್ತಲೂ ಧೂಳು ಆವರಿಸಿದೆ. ವೀಡಿಯೊದ ಕೊನೆಯ ಕೆಲವು ಸೆಕೆಂಡುಗಳಲ್ಲಿ, ದಟ್ಟವಾದ ಧೂಳು ಕ್ಯಾಮೆರಾದ ನೋಟವನ್ನು ಸಂಪೂರ್ಣವಾಗಿ ಆವರಿಸುತ್ತದೆ, ಏನೂ ಗೋಚರಿಸುವುದಿಲ್ಲ. ದಯಾಳ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಿನ ಜಾವ 3:02 ಕ್ಕೆ ಸಂಭವಿಸಿದ ಕುಸಿತದ ನಂತರ ಸುಮಾರು 22 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿತು. ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾದ ಕೆಲವೇ ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ. ಘಟನೆ ಕುರಿತು ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ, 14 ಜನರನ್ನು ರಕ್ಷಿಸಲಾಗಿದೆ, ಮತ್ತು ನಾಲ್ವರು ಸಾವನ್ನಪ್ಪಿದ್ದಾರೆ ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Couple Self Harming: ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ದಂಪತಿ ಶವ ಪತ್ತೆ
ಪ್ರತ್ಯೇಕ ಘಟನೆಯಲ್ಲಿ, ಉತ್ತರ ಪ್ರದೇಶದ ಮೀರತ್ನಲ್ಲಿ ಶುಕ್ರವಾರ ಸಂಜೆ ಬಲವಾದ ಬಿರುಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಬ್ಬ ಮಹಿಳೆ ಮತ್ತು ಅವರ ಒಂಬತ್ತು ತಿಂಗಳ ಮಗಳು ಸೇರಿದ್ದಾರೆ. ಲಿಸಾಡಿ ಗೇಟ್ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಕುಟುಂಬದ ಇತರ ಮೂವರು ಸದಸ್ಯರು ಗಾಯಗೊಂಡಿದ್ದಾರೆ.
[ad_2]
Source link