[ad_1]
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಘಟನೆಯಲ್ಲಿ ಈ ವರೆಗೆ 25 ಕ್ಕೂ ಅಧಿಕ ಪ್ರವಾಸಿಗರು ಮೃತಪಟ್ಟಿದ್ದಾರೆ (Pahalgam Terror Attack) ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗಾಯಾಳುಗಳನ್ನು ಅನಂತ್ನಾಗ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಹಿಳೆಯೊಬ್ಬರು ತನ್ನ ಗಂಡನ್ನನ್ನು ಕಾಪಾಡಿ ಎಂದು ಕೂಗಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಂಡಿನ ದಾಳಿಯಿಂದ ಬೆಚ್ಚಿಬಿದ್ದ ಮಹಿಳೆಯರು ಅತ್ತಿತ್ತ ಓಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹಲವರು ಗಾಯಗೊಂಡು ನೆಲದ ಮೇಲೆ ಬಿದ್ದಿದ್ದಾರೆ.
कश्मीर मे आतंकी हमले की दर्दनाक तस्वीर
सुनिए एक महिला पर्यटक से 👇— दिव्या कुमारी (@divyakumaari) April 22, 2025
ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ದಯವಿಟ್ಟು ನನ್ನ ಗಂಡನನ್ನು ಉಳಿಸಿ ಎಂದು ಅಂಗಲಾಚಿ ಬೇಡಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ದುಃಖಕರ ದೃಶ್ಯಗಳು ಹಲವಾರು ಮಹಿಳೆಯರು ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ತೀವ್ರವಾಗಿ ಗಾಯಗೊಂಡ ವ್ಯಕ್ತಿಯ ಪಕ್ಕದಲ್ಲಿ ನಿಂತಿದ್ದ ಇನ್ನೊಬ್ಬ ಮಹಿಳೆ, “ದಯವಿಟ್ಟು ನನ್ನ ಗಂಡನನ್ನು ಉಳಿಸಿ. ದೇವರೇ ಅವನನ್ನು ಉಳಿಸಿ ಎಂದು ಬೇಡಿಕೊಂಡಿದ್ದಾರೆ. ದಯವಿಟ್ಟು, ಯಾರಾದರೂ ಅವನನ್ನು ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಆಕೆ ಕಣ್ಣೀರು ಹಾಕಿದ್ದಾರೆ. ಆಕೆಯ ಗಂಡ ರಕ್ತದ ಮಡುವಿನಲ್ಲಿಯೇ ಬಿದ್ದು ಒದ್ದಾಡಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಮಹಿಳೆ ನಾವು ತಿಂಡಿ ತಿನ್ನುತ್ತಿದ್ದಾಗ ಒಬ್ಬ ವ್ಯಕ್ತಿ ಬಂದು ನನ್ನ ಗಂಡನಿಗೆ ಗುಂಡು ಹಾರಿಸಿದ ಎಂದು ಹೇಳಿದ್ದಾರೆ. ಗಾಯಗೊಂಡಿರುವ ಹಲವರು ನೆಲದ ಮೇಲೆ ಬಿದ್ದು ಒದ್ದಾಡಿದ್ದಾರೆ. ಈ ದಾಳಿಯಲ್ಲಿ ಕನಿಷ್ಟ 25 ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕ ಮೂಲದ ಮಂಜುನಾಥ್ ಅವರು ಮೃತಪಟ್ಟಿದ್ದಾರೆ. ಹೌದು, ಈ ಬಗ್ಗೆ ಉದ್ಯಮಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮಾಹಿತಿ ಹಂಚಿಕೊಂಡಿದ್ದಾರೆ. ಏ.19ರಂದು ಪ್ರವಾಸಕ್ಕೆ ಹೋಗಿದ್ದೆವು. ನಮ್ಮ ಕಣ್ಣೆದುರಿಗೇ ಪತಿಯ ತಲೆಗೆ ಗುಂಡಿಟ್ಟು ಕೊಂದರು. ನೀವು ಹಿಂದುಗಳಾ ಎಂದು ಕೇಳಿ ಗಂಡಸರನ್ನು ಕೊಂದಿದ್ದಾರೆ. ಪತಿಯನ್ನು ಕೊಲ್ಲುವಾಗ ನನ್ನ ಹಾಗೂ ಮಗನನ್ನು ಕೊಂದುಬಿಡಿ ಎಂದು ನಾವು ಉಗ್ರರಿಗೆ ಹೇಳಿದೆವು. ಆಗ ಅವರು ನಿಮ್ಮನ್ನು ಕೊಲ್ಲಲ್ಲ, ಹೋಗಿ ಮೋದಿಗೆ ಹೇಳಿ ಎಂದರು.
ಈ ಸುದ್ದಿಯನ್ನೂ ಓದಿ: Terror Attack: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ; ಆರು ಮಂದಿ ಪ್ರವಾಸಿಗರಿಗೆ ಗಾಯ
ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದಾರೆ. ಈ ಘಟನೆಯನ್ನು ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಅವರನ್ನು ನಾವು ಸುಮ್ಮನರ ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಅವರ ದುಷ್ಟ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
[ad_2]
Source link