[ad_1]
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳ (Physical abuse ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಹಿಳೆ ಮೇಘನಾ ಎಂಬುವವರು ದೂರು ನೀಡಿದ್ದಾರೆ. ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ದೂರು ನೀಡಿದ್ದರೂ ಎಫ್ಐಆರ್ ದಾಖಲಿಸದೆ ಪೊಲೀಸರು ಕೇಸನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಯತ್ನ: ದಿಲೀಪ್ ಕುಮಾರ್
ಆರೋಪ ಮಾಡಿರುವ ಮಹಿಳೆ ಹತ್ತು ತಿಂಗಳ ಹಿಂದೆ ಜೀನಿ ಸಂಸ್ಥೆಗೆ ಕೆಲಸಕ್ಕೆ ಸೇರಿದ್ದು, ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಕೆಲಸದಿಂದ ತೆಗೆದುಹಾಕಲಾಗಿದೆ. ಹೀಗಾಗಿ ಮಂಗಳವಾರ ನಮ್ಮ ಸಂಸ್ಥೆಯ ಮುಂದೆ ಹತ್ತು ಜನರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ. ನಾನು ಮಹಿಳೆಗೆ ಯಾವುದೇ ಲೈಂಗಿಕ ಕಿರುಕಳ ನೀಡಿಲ್ಲ. ಕಳೆದ ಒಂದು ವರ್ಷದಿಂದ ನನ್ನ ಮೇಲೆ ವಿವಿಧ ರಾಜಕೀಯ ಮುಖಂಡರು ಹನಿ ಟ್ರ್ಯಾಪ್ ಮಾಡಲು ಸಾಕಷ್ಟು ಬಾರಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜನಪ್ರಿಯತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನನಗೆ ತೊಂದರೆ ನೀಡಿ, ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವರು ಯತ್ನಿಸುತ್ತಿರುತ್ತಾರೆ ಎಂದು ಜೀನಿ ಸಂಸ್ಥೆಯ ಮಾಲೀಕ ದಿಲೀಪ್ಕುಮಾರ್ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Pahalgam Terror Attack: ವೈದ್ಯಕೀಯ ವೀಸಾ ಹೊಂದಿದ್ದರೂ 5 ದಿನಗಳೊಳಗೆ ದೇಶ ತೊರೆಯಬೇಕು ; ಪಾಕಿಸ್ತಾನಿಯರಿಗೆ ವಿದೇಶಾಂಗ ಇಲಾಖೆ ಸೂಚನೆ
ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರಿನ (Mangaluru) ಕೆಎಸ್ಆರ್ಟಿಸಿ ಬಸ್ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ (KSRTC bus conductor) ಲೈಂಗಿಕ ಕಿರುಕುಳ (Harassment) ನೀಡಿದ ಘಟನೆ ನಡೆದಿದ್ದು, ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಈ ಘಟನೆ ಸಂಭವಿಸಿದೆ. ಕಂಡಕ್ಟರ್ ಪ್ರದೀಪ್ ಎಂಬಾತ ಯುವತಿಯ ಪಕ್ಕದಲ್ಲಿ ನಿಂತು ಅವರ ಖಾಸಗಿ ಅಂಗಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆಯನ್ನು ಸಹ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಕೃತ್ಯದಿಂದ ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮಂಗಳೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಕ್ರಮ ಕೈಗೊಂಡಿದ್ದಾರೆ. ಆರೋಪಿ ಕಂಡಕ್ಟರ್ ಪ್ರದೀಪ್ನನ್ನು ಅಮಾನತುಗೊಳಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸ್ ತನಿಖೆಗೆ ಒಪ್ಪಿಸಲಾಗಿದೆ. ಸಾರ್ವಜನಿಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮಹಿಳೆಯರ ಸುರಕ್ಷತೆಗಾಗಿ ಬಸ್ಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಸ್ಥಾಪನೆ ಮತ್ತು ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
[ad_2]
Source link