[ad_1]
ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ (Mumbai Indians) ತಂಡ, ಎದುರಾಳಿ ಲಖನೌ ಸೂಪರ್ ಜಯಂಟ್ಸ್ (Lucknow Super Giants) ವಿರುದ್ದ 54 ರನ್ಗಳ ಭರ್ಜರಿ ಗೆಲುವು ಪಡೆದಿದೆ. ಆ ಮೂಲಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಪಾಯಿಂಟ್ಸ್ ಟೇಬಲ್ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಆದರೆ, ಬ್ಯಾಟಿಂಗ್ ವೈಫಲ್ಯದಿಂದ ಸೋಲು ಅನುಭವಿಸಿದ ಲಖನೌ ಸೂಪರ್ ಜಯಂಟ್ಸ್ ತಂಡ ಆರನೇ ಸ್ಥಾನದಲ್ಲಿಯೇ ಉಳಿದಿದೆ. ಬ್ಯಾಟಿಂಗ್ನಲ್ಲಿ 29 ರನ್ ಹಾಗೂ ಬೌಲಿಂಗ್ನಲ್ಲಿ ಎರಡು ನಿರ್ಣಾಯಕ ವಿಕೆಟ್ಗಳನ್ನು ಕಬಳಿಸಿ ಮುಂಬೈ ಗೆಲುವಿಗೆ ನೆರವಾದ ವಿಲ್ ಜ್ಯಾಕ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
[ad_2]
Source link