[ad_1]
ಹೈದರಾಬಾದ್: ಡೆಲ್ಲಿ ಕ್ಯಾಪಿಟಲ್ಸ್ (Delhi capitals) ವಿರುದ್ದ ಸುಲಭವಾಗಿ ಗೆದ್ದು 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಪ್ಲೇಆಫ್ಸ್ ಆಸೆಯನ್ನು ಜೀವಂತವಾಗಿಸಿಕೊಳ್ಳುವ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಕನಸನ್ನು ಮಳೆರಾಯ ಭಗ್ನಗೊಳಿಸಿದೆ. ಸೋಮವಾರ ಇಲ್ಲಿನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಟೂರ್ನಿಯ 55ನೇ ಪಂದ್ಯ ಮಳೆಗೆ ಬಲಿಯಾಯಿತು. ಕಡಿಮೆ ಮೊತ್ತವನ್ನು ಕಲೆ ಹಾಕಿದ್ದ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನ ದವಡೆಗೆ ಸಿಲುಕಿತ್ತು. ಆದರೆ, ಮಳೆ ಬಂದ ಕಾರಣ ಪಂದ್ಯದ ಫಲಿತಾಂಶ ಮೂಡಿ ಬರಲಿಲ್ಲ. ಹಾಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಳೆರಾಯನ ಕೃಪ ಕಟಾಕ್ಷದಿಂದ ಒಂದು ಅಂಕವನ್ನು ತನ್ನ ಖಾತೆಗೆ ಸೇರಿಸಕೊಂಡಿತು. ಆದರೆ, ಎಸ್ಆರ್ಎಚ್ ಒಂದು ಅಂಕ ಸಿಕ್ಕರೂ ಯಾವುದೇ ಪ್ರಯೋಜನವಾಗಲಿಲ್ಲ. ಟೂರ್ನಿಯಿಂದ ಎಲಿಮಿನೇಟ್ ಆಯಿತು.
[ad_2]
Source link