[ad_1]
ಇಸ್ಲಾಮಾಬಾದ್: ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಪ್ರತೀಕವಾಗಿ ಭಾರತ ಆಪರೇಷನ್ ಸಿಂಧೂರದ ಮೂಲಕ ವೈಮಾನಿಕ ದಾಳಿ ನಡೆಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದೆ. ಜೆಇಎಂನ ಪ್ರಬಲ ಕೋಟೆಯಾದ ಬಹವಾಲ್ಪುರ್ ಮತ್ತು ಮುರಿಡ್ಕೆಯಲ್ಲಿ ಎರಡು ದೊಡ್ಡ ದಾಳಿಗಳನ್ನು ನಡೆಸಲಾಗಿದ್ದು, ಪ್ರತಿ ಸ್ಥಳದಲ್ಲಿ ಅಂದಾಜು 25–30 ಭಯೋತ್ಪಾದಕರು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದೀಗ ಉಗ್ರ ಮಸೂದ್ ಅಝರ್ನ ಕುಟುಂಬಸ್ಥರು ದಾಳಿಯಲ್ಲಿ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತನ ಸಹೋದರ, ಸಹೋದರಿಯರು ಸೇರಿದಂತೆ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಅಝರ್ ಎಲ್ಲಿದ್ದ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
[ad_2]
Source link