[ad_1]
ಹೊಸದಿಲ್ಲಿ: ಭಯೋತ್ಪಾದನೆ ವಿರುದ್ಧ ಭಾರತೀಯ ಸೇನೆ ಸಮರ ಸಾರಿದ್ದು, ಮೇ 7ರಂದು ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆಗಳಲ್ಲಿ ದಾಳಿ ನಡೆಸಿದೆ. ಆಪರೇಷನ್ ಸಿಂದೂರ್ (Operation Sindoor) ಹೆಸರಿನಲ್ಲಿ ನಡೆದ ಈ ದಾಳಿಯಲ್ಲಿ ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ನ ಮುಖಂಡ ಮತ್ತು ಐಸಿ-814 (IC-814) ಕಂದಾಹಾರ್ ವಿಮಾನ ಅಪಹರಣದ ಮಾಸ್ಟರ್ ಮೈಂಡ್ ಅಬ್ದುಲ್ ರಾವುಫ್ ಅಜರ್ (Abdul Rauf Azhar) ಕೂಡ ಸಾವನ್ನಪ್ಪಿದ್ದಾನೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಆತನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಮೂಲಗಳು ದೃಢಪಡಿಸಿವೆ.
ಪಾಕ್ನ ಪಂಜಾಬ್ ಪ್ರಾಂತ್ಯದ ಬಹವಾಲ್ಪುರ್ ಮತ್ತು ಮುರ್ಡಿಕೆಯಲ್ಲಿದ್ದ ಜೈಷೆ ಮತ್ತು ಲಷ್ಕರ್ ಉಗ್ರ ಸಂಘಟನೆಗಳ ತಾಣಗಳನ್ನು ಭಾರತೀಯ ಸಶಸ್ತ್ರ ಪಡೆಗಳು ಧ್ವಂಸಗೊಳಿಸಿವೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.
Big news : It is confirmed that Abdul Rauf Azhar was killed in #OperationSindoor.
He’s the brother of Masood Azhar and was mastermind of Kandhar IC-814 (Indian) hijack & many other terrorist attacks in India. pic.twitter.com/UgFu7vrvjT
— Mr Sinha (@MrSinha_) May 8, 2025
ಈ ಸುದ್ದಿಯನ್ನೂ ಓದಿ: Operation Sindoor: 70 ಅಲ್ಲ… 100 ಉಗ್ರರನ್ನು ಹೊಡೆದುರುಳಿಸಿದ್ದೇವೆ ; ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆ
ʼʼಹತ್ಯೆಗೀಡಾದವರಲ್ಲಿ ಜೈಶ್-ಮೊಹಮ್ಮದ್ನ ಮುಖ್ಯಸ್ಥ, ಐಸಿ -814 ಕಂದಾಹಾರ್ ವಿಮಾನ ಅಪಹರಣದ ಮಾಸ್ಟರ್ ಮೈಂಡ್ ಮತ್ತು ಅಂತಾರಾಷ್ಟ್ರೀಯ ಜಿಹಾದಿ ಜಾಲದ ಮುಖಂಡ ಅಬ್ದುಲ್ ರವೂಫ್ ಅಜರ್ ಕೂಡ ಸೇರಿದ್ದಾನೆʼʼ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ವಾಮಾ, ಪಠಾಣ್ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ಅಜರ್ ಭಾಗಿಯಾಗಿದ್ದ. ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಅತ್ಯಂತ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬ ಎನಿಸಿಕೊಂಡಿದ್ದ. ಈತ ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ನ ಸಹೋದರನೂ ಹೌದು.
[ad_2]
Source link