[ad_1]
ನವದೆಹಲಿ: ರೋಹಿತ್ ಶರ್ಮಾ(Rohit Sharma) ಅವರ ಅದ್ಭುತ ಟೆಸ್ಟ್ ವೃತ್ತಿಜೀವನವನ್ನು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ ಹಾಗೂ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ. 2013ರಲ್ಲಿ ಈಡನ್ ಗಾರ್ಡನ್ಸ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ರೋಹಿತ್ ಶರ್ಮಾಗೆ 280ನೇ ಸಂಖ್ಯೆ ಟೆಸ್ಟ್ ಕ್ಯಾಪ್ ಅನ್ನು ನೀಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ರೋಹಿತ್ ತಮ್ಮ ಪದಾರ್ಪಣೆ ಟೆಸ್ಟ್ ಪಂದ್ಯದಲ್ಲಿ 177 ರನ್ ಗಳಿಸಿದ್ದರು ಹಾಗೂ ನಂತರ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಜೇಯ 111 ರನ್ ಬಾರಿಸಿದ್ದರು. ಭಾರತ ಎರಡೂ ಪಂದ್ಯಗಳನ್ನು ಇನಿಂಗ್ಸ್ ಅಂತರದಲ್ಲಿ ಗೆದ್ದಿತ್ತು. ಆ ಮೂಲಕ ರೋಹಿತ್ ಶರ್ಮಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ, ಸಚಿನ್ ತೆಂಡೂಲ್ಕರ್ ಅವರ ಕೊನೆಯ ಟೆಸ್ಟ್ ಇದಾಗಿತ್ತು.
“2013 ರಲ್ಲಿ ಈಡನ್ ಗಾರ್ಡನ್ಸ್ನಲ್ಲಿ ನಿಮಗೆ ಟೆಸ್ಟ್ ಕ್ಯಾಪ್ ನೀಡಿದ್ದನ್ನು ಹಾಗೂ ಮತ್ತೊಂದು ದಿನ ಮುಂಬೈನ ವಾಂಖೆಡೆ ಕ್ರೀಡಾಂಗಣದ ಬಾಲ್ಕನಿಯಲ್ಲಿ ನಿಮ್ಮೊಂದಿಗೆ ನಿಂತಿದ್ದನ್ನು ನಾನು ನೆನಪಿಸಿಕೊಳ್ಳುತ್ತೇನೆ – ನಿಮ್ಮ ಪ್ರಯಾಣ ಅದ್ಭುತವಾಗಿದೆ. ಅಂದಿನಿಂದ ಇಲ್ಲಿಯವರೆಗೆ ನೀವು ಒಬ್ಬ ಆಟಗಾರನಾಗಿ ಮತ್ತು ನಾಯಕನಾಗಿ ಭಾರತೀಯ ಕ್ರಿಕೆಟ್ಗೆ ನೀವು ಅತ್ಯುತ್ತಮ ಕೊಡುಗೆಯನ್ನು ನೀಡಿದ್ದೀರಿ. ವೆಲ್ ಡನ್ ರೋಹಿತ್, ನಿಮ್ಮ ಟೆಸ್ಟ್ ವೃತ್ತಿಜೀವನಕ್ಕೆ ಅಭಿನಂದನೆಗಳು ಮತ್ತು ನಿಮ್ಮ ಭವಿಷ್ಯಕ್ಕೆ ಶುಭವಾಗಲಿ,” ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.
[ad_2]
Source link