[ad_1]
ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ (Anand Guruji) ಅವರಿಗೆ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ (ಎ1) ಹಾಗೂ ಟಿವಿ ನಿರೂಪಕಿ ದಿವ್ಯಾ ವಸಂತ (ಎ2) ಸೇರಿ ಇಬ್ಬರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಆನಂದ್ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಆನಂದ ಗುರೂಜಿಯ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ.
ವಿಡಿಯೋ ಇದೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ಗಳ ಮೂಲಕ ಮಾನಹಾನಿ ಮಾಡಿದ್ದಾರೆ. ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Physical abuse: ʻಬೆಸ್ಟ್ ಟೀಚರ್ ಅವಾರ್ಡ್ʼ ಪಡೆದಿದ್ದ ಶಿಕ್ಷಕಿ ಇದೀಗ ಜೈಲುಪಾಲು; ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ 30 ವರ್ಷಗಳ ಸಜೆ
[ad_2]
Source link