[ad_1]
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ.ಎ. ಸಲೀಂ (Dr. MA Saleem) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿರ್ಗಮಿತ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಬ್ಯಾಟನ್ ನೀಡುವ ಮೂಲಕ ಬುಧವಾರ ಅಧಿಕಾರ ಹಸ್ತಾಂತರಿಸಿದರು. ರಾಜ್ಯ ಡಿಜಿ-ಐಜಿಪಿಯಾಗಿದ್ದ ಡಾ. ಅಲೋಕ್ ಮೋಹನ್ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗಿದ್ದಾರೆ. ಹೀಗಾಗಿ 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ (DGP KARNATAKA) ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ. ಎಂ. ಎ ಸಲೀಂ ಅವರು 1966ರ ಜೂನ್ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
1993ನೇ ಬ್ಯಾಚ್ನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿರುವ ಇವರು, ಪೊಲೀಸ್ ಇಲಾಖೆಯಲ್ಲಿ ಕಳೆದ 30 ವರ್ಷಗಳಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕುಶಾಲನಗರ ಎಎಸ್ಪಿಯಾಗಿ 1995ರಲ್ಲಿ ನೇಮಕಗೊಳ್ಳುವ ಮೂಲಕ ತಮ್ಮ ವೃತ್ತಿ ಆರಂಭಿಸಿದ ಇವರು, 1998ರಲ್ಲಿ ಉಡುಪಿ ಪೊಲೀಸ್ ಅಧೀಕ್ಷಕರಾಗಿ ಎಸ್ಪಿ ಹುದ್ದೆಗೇರಿದ್ದರು.
ಬಳಿಕ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ, ಮೈಸೂರು ನಗರದ ಪೊಲೀಸ್ ಆಯುಕ್ತರಾಗಿ ಮತ್ತು ಬೆಂಗಳೂರಿನ ವಿಶೇಷ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಇಲಾಖೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನೂ ಮುನ್ನಡೆಸಿದ್ದ ಇವರು ಪ್ರಸ್ತುತ ಕರ್ನಾಟಕದ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ನ (ಸಿಐಡಿ) ಡಿಜಿಪಿ ಹುದ್ದೆಯಲ್ಲಿದ್ದಾರೆ. ಇದೀಗ ಇವರನ್ನೇ ಹಂಗಾಮಿ ಡಿಜಿ-ಐಜಿಪಿಯಾಗಿ ಸರ್ಕಾರ ನೇಮಕ ಮಾಡಿದೆ.
ಈ ಸುದ್ದಿಯನ್ನೂ ಓದಿ | Kumki Elephants: ಆಂಧ್ರಕ್ಕೆ ರಾಜ್ಯದ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಸಿಎಂ
[ad_2]
Source link