[ad_1]
ಮುಂಬೈ: ಸೂರ್ಯಕುಮಾರ್ ಯಾದವ್ (73*) ಅವರ ಅರ್ಧಶತಕ ಹಾಗೂ ಮಿಚೆಲ್ ಸ್ಯಾಂಟ್ನರ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ಸಹಾಯದಿಂದ ಮುಂಬೈ ಇಂಡಿಯನ್ಸ್ (MI) ತಂಡ, ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ದ 59 ರನ್ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಪ್ಲೇಆಫ್ಸ್ ಟಿಕೆಟ್ ಅನ್ನು ಪಡೆದುಕೊಂಡಿತು. ಆದರೆ, ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯಿಂದ ಎಲಿಮಿನೇಟ್ ಆಯಿತು. ಮುಂಬೈ ಇಂಡಿಯನ್ಸ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಸೂರ್ಯಕುಮಾರ್ ಯಾದವ್ (Suryakumar Yadav) ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
[ad_2]
Source link