[ad_1]
ಬೆಂಗಳೂರು: ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ, ದೇಶದ ಪ್ರಮುಖ ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಕರೂರ್ ವೈಶ್ಯ ಬ್ಯಾಂಕ್ (Karur Vysya Bank) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KVB Recruitment 2025). ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಿಗೆ ನೇಮಕಾತಿ ನಡೆಯಲಿದೆ. ರಿಲೇಷನ್ಶಿಪ್ ಮ್ಯಾನೇಜರ್ (ಸೇಲ್ಸ್) ಹುದ್ದೆ ಇದಾಗಿದೆ (Bank Jobs). ಪದವಿ, ಸ್ನಾತಕೋತ್ತರ ಪದವಿ ಹೊಂದಿದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು (Job Guide). ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 30.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ರಿಲೇಷನ್ಶಿಪ್ ಮ್ಯಾನೇಜರ್ (ಸೇಲ್ಸ್) ಹುದ್ದೆ ಇದಾಗಿದ್ದು, ನಿರ್ದಿಷ್ಟವಾಗಿ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎನ್ನುವುದನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ. ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ, ಈ ಹುದ್ದೆಗೆ ಅರ್ಜಿ ಸಲ್ಲಿಸಲು 4-9 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಎಲ್ಲೆಲ್ಲ ಹುದ್ದೆ ಖಾಲಿ ಇದೆ?
ಬೆಂಗಳೂರು, ಮುಂಬೈ, ಅಹಮದಾಬಾದ್, ದಿಲ್ಲಿ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣ, ತಿರುಪತಿ, ಚೆನ್ನೈ, ಕೊಯಂಬತ್ತೂರು, ಸೇಲಂ, ಮಧುರೈ, ತಿರುನಲ್ವೆಲಿ ಮುಂತಾದ ಕಡೆ ಹುದ್ದೆಗಳಿವೆ.
ಆಯ್ಕೆ ವಿಧಾನ
ವೈಯಕ್ತಿಕ/ಆನ್ಲೈನ್ ಸಂದರ್ಶನ, ವೈದ್ಯಕೀಯ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇಂಗ್ಲಿಷ್ ಭಾಷೆಯ ಜತೆಗೆ ಸ್ಥಳೀಯ ಭಾಷೆಯ ಮೇಲೆ ಹಿಡಿತ ಹೊಂದಿರಬೇಕು.
KVB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ವಿವರಗಳಿಗೆ ಕರೂರ್ ವೈಶ್ಯ ಬ್ಯಾಂಕ್ನ ಅಧಿಕೃತ ವೆಬ್ಸೈಟ್ ವಿಳಾಸ kvb.co.inಗೆ ಭೇಟಿ ನೀಡಿ.
[ad_2]
Source link