[ad_1]
ಈ ಸಮಾವೇಶದಲ್ಲಿ ಬಿಸಿನೆಸ್ ಫೋರಮ್, ವುಮೆನ್ಸ್ ಫೋರಮ್ ಕವಿ ಗೋಷ್ಠಿ, ಯೂಥ್ ಫೋರಮ್, ಸಾಹಿತ್ಯ ಗೋಷ್ಠಿ ಹೀಗೆ ಅನೇಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ಸತತವಾಗಿ ನಡೆಯಲಿವೆ. ಈ ಸಮಾವೇಶದಲ್ಲಿ ಅನಿವಾಸಿಯರು ಮಾತ್ರವಲ್ಲದೇ ಕರ್ನಾಟಕದ ಕಲಾವಿದರಿಂದ ವೈವಿದ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಈ ಸಮಾವೇಶವ ವಿಶ್ವ ಕನ್ನಡಿಗರು ಸಂಸ್ಥೆಯು ಫ್ಲೋರಿಡಾ ರಾಜ್ಯದಲ್ಲಿರುವ ನಾಲ್ಕು ಪ್ರಮುಖ ಕನ್ನಡ ಸಂಘಗಳಾದ ಶ್ರೀಗಂಧ ಕನ್ನಡ ಕೂಟ, ಟಾಂಪ, ಒರ್ಲಾಂಡೋ ಕನ್ನಡ ಕೂಟ, ನಂದಿ ಕನ್ನಡ ಕೂಟ, ಮಯಾಮಿ ಮತ್ತು ಸವಿಕನ್ನಡ ಕೂಟ ಜ್ಯಾಕ್ಸನ್ವೆಲ್ ಸಹಯೋಗದೊಂದಿಗೆ ಈ ಬೃಹತ್ ವಿಶ್ವ ಕನ್ನಡ ಸಮಾವೇಶವನ್ನು ಆಯೋಜಿಸುತ್ತಿದೆ. ಈ ಜಾಗತಿಕ ಸಮಾವೇಶವು ನಮ್ಮ ಭಾಷೆ, ಸಂಸ್ಕೃತಿ ಮತ್ತು ಏಕತೆಯನ್ನು ಆಚರಿಸಲು ಖಂಡಗಳಾದ್ಯಂತದ ಸಾವಿರಾರು ಕನ್ನಡಿಗರನ್ನು ಮತ್ತೊಮ್ಮೆ ಒಟ್ಟುಗೂಡಿಸುತ್ತದೆ.
[ad_2]
Source link