[ad_1]
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದ 11 ಮಂದಿಯ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು. ಇದೀಗ ಪರಿಹಾರ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತದಲ್ಲಿ 11 ಜನರು ಸಾವಿಗೀಡಾಗಿದ್ದರು. ಅವರ ಕುಟುಂಬಗಳಿಗೆ ಈ ಮೊದಲು ತಲಾ 10 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿ ಘೋಷಿಸಿದ್ದರು. ಅಲ್ಲದೆ ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನೂ ಸರಕಾರ ಭರಿಸಲಿದೆ ಎಂದು ಹೇಳಿದ್ದರು. ಅಲ್ಲದೇ ಆರ್ಸಿಬಿ 10 ಲಕ್ಷ ಹಾಗೂ ಕೆಎಸ್ಸಿಎ 5 ಲಕ್ಷ ಪರಿಹಾರವನ್ನು ಘೋಷಿಸಿತ್ತು.
[ad_2]
Source link