[ad_1]
ಬಾಗೇಪಲ್ಲಿ : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ತಾಲೂಕಿನಾದ್ಯಂತ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.
ಬೆಳಗ್ಗೆಯಿಂದಲೇ ಪಟ್ಟಣದ ಕೊಡಿಕೊಂಡೆ ರಸ್ತೆಯಲ್ಲಿರುವ ಈದ್ಗಾ ಮೆ?ದಾನಕ್ಕೆ ತೆರಳಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೃದ್ಧರಿಂದ ಹಿಡಿದು ಚಿಕ್ಕ ಮಕ್ಕಳು ಕೂಡ ಭಾಗವಹಿಸಿದ್ದರು. ಧರ್ಮ ಗುರುಗಳಾದ ರಿಜ್ವಾನ್ ಅಹಮದ್ ಹಬ್ಬದ ಸಂದೇಶ ಸಾರಿ, ದಾನ – ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು.
ಮುಸ್ಲಿಂ ಧರ್ಮದಲ್ಲಿ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ನಮಾಜ್, ಹಜ್, ರೋಜಾ, ಜಕಾತ, ಸಿತ್ರಾ ಈ ಪಂಚ ಸೂತ್ರಗಳನ್ನು ಪಾಲಿಸಿದಾಗ ಮಾತ್ರ ಅಲ್ಲಾಹನ ಕೃಪೆಗೆ ಪಾತ್ರರಾಗಿ ಮೋಕ್ಷ ಪಡೆಯಲು ಸಾಧ್ಯ. ಅನಿವಾರ್ಯ ಸಂದರ್ಭದಲ್ಲಿ ದೇಶ, ಧರ್ಮ ಹಾಗೂ ಮಾನವ ಕುಲಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಲು ಸನ್ನದ್ಧಗೊಳಿಸುವುದು ಈ ಹಬ್ಬದ ಆಚರಣೆಯ ಉದ್ದೇಶವಾಗಿದೆ ಎಂದರು.
ಇದನ್ನೂ ಓದಿ: Chikkaballapur news: ಜೂ.19ಕ್ಕೆ ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿ ದೇಶದಲ್ಲಿ ಸುಖ, ಶಾಂತಿ, ನೆಮ್ಮದಿಯ ಜೊತೆಗೆ ಸಮೃದ್ಧ ಮಳೆಯಾಗಲಿ ಎಂದು ಪ್ರಾರ್ಥಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಪ್ರದಾಯದಂತೆ ಕುರ್ಬಾನಿ ನೀಡಿ, ಅಲ್ಲಾಹುವಿನ ಕೃಪೆಗೆ ಪಾತ್ರರಾದರು.
ತದನಂತರ ಚಿಕ್ಕ ಮಕ್ಕಳು ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿ ಕೊಂಡರು.
ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ಪೋಲಿಸ್ ಠಾಣೆಯ ಆರಕ್ಷಕ ನಿರೀಕ್ಷಕ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭ ದಲ್ಲಿ ಹಿರಿಯ ಮುಖಂಡರಾದ ಮುನೀರ್ ಅಹಮದ್, ಅಬ್ದುಲ್ ಕರೀಮ್ ಸಾಬ್, ಮಹಮ್ಮದ್ ನೂರುಲ್ಲಾ, ಮುಸ್ತಫಾ, ಜಬೀವುಲ್ಲಾ, ಅನ್ಸರ್ , ಸೈಯದ್ ಸಿದ್ದೀಕ್, ವಸೀಮ್, ಅಬ್ದುಲ್ ರಹೀಮ್,ಶ ಬೀರ್ ಬಾಷಾ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡರು.
[ad_2]
Source link