[ad_1]
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಬಿರುಗಾಳಿ, ಗುಡುಗು ಸಹಿತ ಮಳೆ (Karnataka Rains) ಅಬ್ಬರಿಸುವ ನಿರೀಕ್ಷೆ ಇದೆ. ಹೀಗಾಗಿ ಜೂನ್ 13ರಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ (Red Alert) ಘೋಷಿಸಿದೆ. ಉಳಿದಂತೆ ಹಾಸನ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಜೂನ್ 14ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಸೇರಿ ಐದು ಜಿಲ್ಲೆಗಳಿಗೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ಜೂನ್ 15ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ದು, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 16ರಂದು ಕರಾವಳಿ ಜಿಲ್ಲೆಗಳು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಮೈಸೂರು, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | Health Tips: ಆರೋಗ್ಯವಂತರಾಗಿರಲು ಬೇಕು ಮಳೆಗಾಲದ ತಯಾರಿ
ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಮಡಿಕೇರಿ: ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜೂನ್ 13ರಂದು ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಜಿಲ್ಲೆಯ ವಿವಿಧೆಡೆ ಭಾರೀ ಮಳೆ ಸುರಿಯುತ್ತಿದೆ. ಕೊಡಗಿನಲ್ಲಿ ಜೂನ್ 12ರಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶುಕ್ರವಾರವೂ ರಜೆ ನೀಡಲಾಗಿದೆ.
[ad_2]
Source link