[ad_1]
ಬೆಂಗಳೂರು: ಹಾಸನದ ಶಾಲೆಗಳಿಗೆ ಬಾಂಬ್ ಬೆದರಿಕೆಯ ಬೆನ್ನಲ್ಲೇ, ಬೆಂಗಳೂರಿನ (Bengaluru news) ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು (Bangalore Police) ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.
ಹೈದರಾಬಾದ್ನಲ್ಲಿ ನಡೆದ ಯಾವ ಅತ್ಯಾಚಾರ ಪ್ರಕರಣ ಸಂಬಂಧ ದುಷ್ಕರ್ಮಿಗಳು ಈ ಬೆದರಿಕೆ ಹಾಕಿದ್ದಾರೆ, ಕರ್ನಾಟಕಕ್ಕೂ ಅದಕ್ಕೂ ಸಂಬಂಧವೇನು ಎನ್ನುವ ಪ್ರಶ್ನೆಗಳು ಈಗ ಉದ್ಭವಿಸಿವೆ. ಸೋಮವಾರ ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟ ಮಾಡಿ ಕಟ್ಟಡ ಧ್ವಂಸ ಮಾಡುವುದಾಗಿ ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಶಾಲೆಗೆ ಭಾನುವಾರ ರಾತ್ರಿ ಬೆದರಿಕೆ ಸಂದೇಶ ಬಂದಿತ್ತು. ಅದರಂತೆ, ಶಾಲೆಯ ಆಡಳಿತ ಮಂಡಳಿಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಾಗೂ ಶ್ವಾನ ದಳ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.
ಹುಸಿ ಬೆದರಿಕೆಗಳ ಹೆಚ್ಚಳ
ಕರ್ನಾಟಕದಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವರ್ಷ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಹುಸಿ ಬೆದರಿಕೆ ಸಂದೇಶಗಳು ಹೆಚ್ಚಾಗಿವೆ. ಅದರಲ್ಲಿಯೂ ಸರಿಸುಮಾರು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಬಾಂಬ್ ಬೆದರಿಕೆ ಪ್ರಕರಣ ಆಗಿದೆ.
ಬೆಂಗಳೂರು ವಾರಾಣಸಿ ಇಂಡಿಗೋ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬೆದರಿಕೆ ಸಂದೇಶ ಏಪ್ರಿಲ್ 27 ರಂದು ಬಂದಿತ್ತು. ಅದಾದ ಎರಡು ದಿನಗಳ ನಂತರ, ಅಂದರೆ ಏಪ್ರಿಲ್ 29 ರಂದು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪ್ರಾಂಶುಪಾಲರಿಗೆ ಕೊಲೆ ಬೆದರಿಕೆಯನ್ನೂ ಹಾಕಲಾಗಿತ್ತು. ಇದೀಗ ಹಾಸನ ಮತ್ತು ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇದನ್ನೂ ಓದಿ: Bomb Threat: ಹಾಸನದಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ, ʼ1 ಗಂಟೆಗೆ ಸ್ಫೋಟʼ ಎಂದು ಎಚ್ಚರಿಕೆ
[ad_2]
Source link