[ad_1]
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ(IND vs ENG) ಭಾರತ ತಂಡದ (India) ಯುವ ಆರಂಭಿಕ ಯಶಸ್ವಿ ಜೈಸ್ವಾಲ್ (Yashasvi Jaiswal), ದಿಗ್ಗಜರಾದ ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಮುರಿದು ಇತಿಹಾಸ ಬರೆಯುವ ಸನಿಹದಲ್ಲಿದ್ದಾರೆ. 2023ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಯಶಸ್ವಿ ಜೈಸ್ವಾಲ್, ಇದೀಗ ವಿಶ್ವ ಕ್ರಿಕೆಟ್ನಲ್ಲಿ ತಮ್ಮದೇ ಪ್ರಭಾವವನ್ನು ಬೀರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತದ ಪರ ಅತಿ ವೇಗವಾಗಿ 2000 ಟೆಸ್ಟ್ ರನ್ ಗಳಿಸಿದ ದಾಖಲೆ ಬರೆಯುವ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್. ಯುವ ಎಡಗೈ ಆಟಗಾರ ಇದುವರೆಗೂ ಆಡಿರುವ 19 ಟೆಸ್ಟ್ (36 ಇನಿಂಗ್ಸ್) ಪಂದ್ಯಗಳಲ್ಲಿ 52.88ರ ಸರಾಸರಿಯಲ್ಲಿ 1798 ರನ್ ಬಾರಿಸಿದ್ದು, ಇದರಲ್ಲಿ 10 ಅರ್ಧಶತಕ ಹಾಗೂ 4 ಶತಕಗಳನ್ನು ಬಾರಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುವ ಐದು ಟೆಸ್ಟ್ ಪಂದ್ಯಗಳ ಮೂರು ಇನಿಂಗ್ಸ್ಗಳಲ್ಲಿ ಜೈಸ್ವಾಲ್ 212 ರನ್ ಗಳಿಸಿದರೆ, ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 2000 ರನ್ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ಆ ಮೂಲಕ ದಿಗ್ಗಜರಾದ ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಮುರಿಯಲಿದ್ದಾರೆ. ಈ ಇಬ್ಬರು ಆಟಗಾರರು ತಮ್ಮ 40ನೇ ಟೆಸ್ಟ್ ಇನಿಂಗ್ಸ್ನಲ್ಲಿ 2000 ರನ್ ಪೂರೈಸಿದ್ದರು.
IND vs ENG: ಕೆಎಲ್ ರಾಹುಲ್ ಬೇಡ, ಶುಭಮನ್ ಗಿಲ್ ಇನಿಂಗ್ಸ್ ಆರಂಭಿಸಲಿ ಎಂದ ಬ್ರಾಡ್ ಹಾಗ್!
ಜೈಸ್ವಾಲ್ಗೆ ಎದುರಾಗಲಿದೆ ಕಠಿಣ ಸವಾಲು
ಚೆಂಡು ಹೆಚ್ಚಾಗಿ ಬೌನ್ಸ್ ಹಾಗೂ ತಿರುವು ಪಡೆಯುವ ಪಿಚ್ಗಳಲ್ಲಿ ಯಶಸ್ವಿ ಜೈಸ್ವಾಲ್ಗೆ ಕಠಿಣ ಸವಾಲು ಎದುರಾಗಲಿದೆ. ಇಂಗ್ಲೆಂಡ್ ಲಯನ್ಸ್ ಹಾಗೂ ಭಾರತ ಎ ನಡುವಣ ಅಭ್ಯಾಸ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ದೊಡ್ಡ ಮೊತ್ತ ಗಳಿಸುವಲ್ಲಿ ಎಡವಿದ್ದಾರೆ. ಕಳೆದ 4 ಇನಿಂಗ್ಸ್ಗಳಲ್ಲಿ ಜೈಸ್ವಾಲ್ ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದರು.
ವಿದೇಶಿ ನೆಲಗಳಲ್ಲಿ ಉತ್ತಮ ಪ್ರದರ್ಶನ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ದಿನದಿಂದಲೂ ಯುವ ಎಡಗೈ ಆಟಗಾರ ಯಶಸ್ವಿ ಜೈಸ್ವಾಲ್, ವಿದೇಶಿ ನೆಲಗಳಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. 2024-25ರ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಆಸ್ಟ್ರೇಲಿಯಾ ಬೌಲರ್ಗಳ ವಿರುದ್ಧ ಪ್ರಾಬಲ್ಯ ಸಾಧಿಸಿದ್ದ ಜೈಸ್ವಾಲ್, 10 ಇನಿಂಗ್ಸ್ಗಳಿಂದ 43.44ರ ಸರಾಸರಿಯಲ್ಲಿ ಒಂದು ಶತಕ ಹಾಗೂ 4 ಅರ್ಧಶತಕಗಳ ನೆರವಿನಿಂದ 391 ರನ್ ಗಳಿಸಿ ಸರಣಿಯ ಎರಡನೇ ಗರಿಷ್ಠ ಸ್ಕೋರರ್ ಆಗಿದ್ದರು. ಬಹುತೇಕ ಆಸ್ಟ್ರೇಲಿಯಾ ಪಿಚ್ ಗುಣವನ್ನೇ ಹೊಂದಿರುವ ಇಂಗ್ಲೆಂಡ್ ಪಿಚ್ಗಳಲ್ಲೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಲು ಯಶಸ್ವಿ ಜೈಸ್ವಾಲ್ ಎದುರು ನೋಡುತ್ತಿದ್ದಾರೆ.
IND vs ENG: ಮೊದಲನೇ ಟೆಸ್ಟ್ಗೆ ಭಾರತದ ಪ್ಲೇಯಿಂಗ್ XI ಆರಿಸಿದ ಸಂಜಯ್ ಬಾಂಗರ್!
ಇಂಗ್ಲೆಂಡ್ ಲಯನ್ಸ್ ಹಾಗೂ ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದಲ್ಲಿ ಒಂದು ಶತಕ ಹಾಗೂ ಒಂದು ಅರ್ಧಶತಕ ಸಿಡಿಸಿ ಉತ್ತಮ ಫಾರ್ಮ್ನಲ್ಲಿರುವ ಕನ್ನಡಿಗ ಕೆಎಲ್ ರಾಹುಲ್ ಜೊತೆಗೆ ಜೈಸ್ವಾಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
[ad_2]
Source link