[ad_1]
ಚಿಕ್ಕಬಳ್ಳಾಪುರ: ಇದೇ ಜೂ.27ರಂದು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸಂಭ್ರಮ ಸಡಗರದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ತಿಳಿಸಿದರು.
ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜೂ.27ರಂದು ನಗರದ ಮರುಳಸಿದ್ದೇಶ್ವರ ಸ್ವಾಮಿ ದೇವಾಲಯದಿಂದ ಎಂ.ಜಿ.ರಸ್ತೆಯ ಒಕ್ಕಲಿಗರ ಕಲ್ಯಾಣ ಮಂಟಪ ದವರೆಗೆ ಪಲ್ಲಕ್ಕಿ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ನಂತರ ಶ್ರೀ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಆ ನಂತರ ವೇದಿಕೆ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.
ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಕಲಾತಂಡಗಳೊAದಿಗೆ ಮೆರವಣಿಗೆ, ಸಾಧಕರ ಆಯ್ಕೆ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಇಲಾಖಾವಾರು ಕಾರ್ಯಭಾರ ಹಂಚಿಕೆ ಮಾಡಿ ಜವಾಬ್ದಾರಿ ವಹಿಸಿದರು. ಜಯಂತ್ಯೋತ್ಸವಕ್ಕೆ ಯಾವುದೇ ಲೋಪ ವಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಂಬಂಧ ಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀಡಿದರು.
ಜಿಲ್ಲೆಯ ಸಮಸ್ತ ನಾಗರಿಕರು, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ರೈತಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷ ಎನ್. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಕೆ.ಮಾಧವಿ, ಚಿಕ್ಕಬಳ್ಳಾಪುರ ತಾಲೂಕು ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ನಪ್ಪ ರೆಡ್ಡಿ, ಗೌರಿಬಿದನೂರು ವಕೀಲ ಸಂಘದ ಮುಖಂಡರಾದ ಜನಾರ್ದನ್ ಮೂರ್ತಿ, ಸಮುದಾಯದ ಮುಖಂಡರಾದ ಗೋಪಾಲಗೌಡ ಕಲ್ವಮಂಜಲಿ, ಮಂಚನ ಬೆಲೆ ಶ್ರೀನಿವಾಸ್ ಹಾಗೂ ವಕ್ಕಲಿಗ ಸಮುದಾಯದ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿ ಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
[ad_2]
Source link