
ಧಾರವಾಡ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಕೂಡಲೇ ಲ್ಯಾಪಟಾಪ್ ವಿತರಣೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕವಿವಿಯ ಆಡಳಿತ ಭವನದ ಎದುರು ಪ್ರತಿಭಟನೆ

ನಡೆಸಿದರು.ಪ್ರತಿಬಾರಿಯೂ ವಿದ್ಯಾರ್ಥಿಗಳು ಹೋರಾಟದ ದಾರಿ ತುಳಿದೇ ಲ್ಯಾಪಟಾಪ್ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಸರ್ಕಾರ ಮತ್ತು ಕವಿವಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರಂಭದಲ್ಲೇ ಲ್ಯಾಪಟಾಪ್ ವಿತರಣೆ ಮಾಡಬೇಕಿತ್ತು.

ಆದರೆ, ಸರ್ಕಾರ ಮತ್ತು ಕವಿವಿ ವಿಳಂಬ ಧೋರಣೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕವಿವಿ ಕಾಳಜಿ ವಹಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಲ್ಯಾಪಟಾಪ್ ವಿತರಣೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.