ಬೆಂಗಳೂರು: ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ (Vijaykumar Chandragi) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜು. 5ರಂದು ಬೆಳಗ್ಗೆ 10.30 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿಜಯಕುಮಾರ ಚಂದರಗಿ ಮೂಲತಃ ಧಾರವಾಡ ಜಿಲ್ಲೆಯವರು. ಉತ್ಸಾಹಿ ಪತ್ರಕರ್ತ. ಶಿವಮೊಗ್ಗ ಸೇರಿದಂತೆ ಹಲವು ಕಡೆ ಕೆಲಸ ಮಾಡಿ ಈಗ ಬೆಂಗಳೂರಿನಲ್ಲಿ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಏನಿದು ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ?
ರೋಹಿತ್ ತುಮಕೂರು ಜಿಲ್ಲೆ ಗ್ರಾಮೀಣ ಪ್ರದೇಶದ ಮೂಲದವರು. ಚಿಕ್ಕ ವಯಸ್ಸಿನಲ್ಲೇ ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಹಲವು ಆಂಗ್ಲ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ದುರದೃಷ್ಟವಶಾತ್ ತೋಟದ ಬಾವಿಯಲ್ಲಿ ಈಜಲು ಹೋಗಿ ಅಕಾಲ ಮರಣಕ್ಕೆ ತುತ್ತಾಗಿದ್ದರು. ಅವರ ತಂದೆ-ತಾಯಿ ರಾಜಣ್ಣ ಮತ್ತು ಲಲಿತಾ ತಮ್ಮ ಮಗನ ಹೆಸರಿನಲ್ಲಿ ಪ್ರತಿ ವರ್ಷ ಪತ್ರಿಕೋದ್ಯಮ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಬ್ಬರು ಯುವ ಪತ್ರಕರ್ತರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಇನ್ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆ್ಯಂಡ್ ರಿಸರ್ಚ್ ಸಂಸ್ಥೆಯ ಪರವಾಗಿ ಹಿರಿಯ ಪತ್ರಕರ್ತ ಎಚ್.ಆರ್.ಶ್ರೀಶ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Namma Metro: ಇನ್ನು ಮುಂದೆ ನಮ್ಮ ಮೆಟ್ರೋ ಟಿಕೆಟ್ ಈ ಐದು ಆ್ಯಪ್ಗಳಲ್ಲೂ ಲಭ್ಯ