[ad_1]
ನವದೆಹಲಿ:
ಇಂಗ್ಲೆಂಡ್ ವಿರುದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 336 ರನ್ಗಳಿಂದ ಭರ್ಜರಿ ಗೆಲುವು ಪಡೆದಿತ್ತು. ಆ ಮೂಲಕ ಬರ್ಮಿಂಗ್ಹ್ಯಾಮ್ಗೆ ಎಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಮೊದಲ ಏಷ್ಯಾ ತಂಡ ಎಂಬ ದಾಖಲೆಯನ್ನು ಟೀಮ್ ಇಂಡಿಯಾ ಬರೆದಿತ್ತು. ವಿರಾಟ್ ಕೊಹ್ಲಿ ಕೂಡ ಈ ಮೈದಾನದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ, ಅವರು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ, ಶುಭಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಎಜ್ಬಾಸ್ಟನ್ನಲ್ಲಿ ಗೆಲುವು ಪಡೆದಿದೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಭಾರತ ತಂಡವನ್ನು ವಿಶೇಷವಾಗಿ ಶುಭಮನ್ ಗಿಲ್ ಅವರನ್ನು ಶ್ಲಾಘಿಸಿದ್ದಾರೆ. ಇದರ ಜೊತೆಗೆ ಇಬ್ಬರು ವೇಗಿಗಳನ್ನು ಕೊಹ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
ಭಾರತ ತಂಡ ಎಜ್ಬಾಸ್ಟನ್ ಟೆಸ್ಟ್ ಪಂದ್ಯವನ್ನು ಗೆದ್ದ ಬಳಿಕ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿರಾಟ್ ಕೊಹ್ಲಿ, “ಎಜ್ಬಾಸ್ಟನ್ನಲ್ಲಿ ಭಾರತ ತಂಡಕ್ಕೆ ಅದ್ಬುತ ಜಯ ಸಿಕ್ಕಿದೆ. ಟೀಮ್ ಇಂಡಿಯಾ ಆಟಗಾರರು ನಿರ್ಭೀತರಾಗಿ ಇಂಗ್ಲೆಂಡ್ ತಂಡವನ್ನು ಗೋಡೆಗೆ ತಳ್ಳುತ್ತಲೇ ಇದ್ದರು. ಶುಭಮನ್ ಗಿಲ್ ನಾಯಕರಾಗಿ ಹಾಗೂ ಬ್ಯಾಟ್ಸ್ಮನ್ ಆಗಿ ಅದ್ಭುತವಾದ ಪ್ರದರ್ಶನವನ್ನು ತೋರಿದ್ದಾರೆ ಹಾಗೂ ತಂಡದ ಪ್ರತಿಯೊಬ್ಬರು ಪ್ರಭಾವಿತ ಪ್ರದರ್ಶನವನ್ನು ತೋರಿದ್ದಾರೆ. ಈ ಪಿಚ್ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಅವರನ್ನು ವಿಶೇಷವಾಗಿ ಉಲ್ಲೇಖಿಸಬೇಕಾಗುತ್ತದೆ,” ಎಂದು ಗುಣಗಾನ ಮಾಡಿದ್ದಾರೆ.
ಭಾರತ ತಂಡದ ಎರಡನೇ ಟೆಸ್ಟ್ ಗೆಲುವಿನ ಶ್ರೇಯ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ಗೆ ಸಲ್ಲಬೇಕು. ಏಕೆಂದರೆ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಮೊಹಮ್ಮದ್ ಸಿರಾಜ್ ತಮ್ಮ ಮಾರಕ ಬೌಲಿಂಗ್ ದಾಳಿಯಿಂದ 5 ವಿಕೆಟ್ ಸಾಧನೆ ಮಾಡಿದ್ದರು. ಆ ಮೂಲಕ ಇಂಗ್ಲೆಂಡ್ ತಂಡವನ್ನು 407 ರನ್ಗಳಿಗೆ ಆಲ್ಔಟ್ ಮಾಡಲು ಭಾರತಕ್ಕೆ ನೆರವು ನೀಡಿದ್ದರು. ಈ ಇನಿಂಗ್ಸ್ನಲ್ಲಿ ಆಕಾಶ್ ದೀಪ್ ಸಿಂಗ್ ಕೂಡ 4 ವಿಕೆಟ್ ಕಿತ್ತಿದ್ದರು. ನಂತರ ದ್ವಿತೀಯ ಇನಿಂಗ್ಸ್ನಲ್ಲಿ ಆಕಾಶ ದೀಪ್ ಅವರು 6 ವಿಕೆಟ್ಗಳನ್ನು ಕಬಳಿಸಿದ್ದರು. ಆ ಮೂಲಕ ಅವರು ಈ ಪಂದ್ಯದಲ್ಲಿ 10 ವಿಕೆಟ್ ಸಾಧನೆ ಮಾಡಿದ್ದರು. ಆ ಮೂಲಕ ಇಂಗ್ಲೆಂಡ್ ತಂಡವನ್ನು 271 ರನ್ಗಳಿಗೆ ಆಲ್ಔಟ್ ಮಾಡಲು ಕಾರಣರಾಗಿದ್ದರು.
ಇನ್ನು ಬ್ಯಾಟಿಂಗ್ನಲ್ಲಿ ಶುಭಮನ್ ಗಿಲ್ ಮಹತ್ತರ ಪ್ರದರ್ಶನವನ್ನು ತೋರಿದ್ದರು. ಅವರು ಪ್ರಥಮ ಇನಿಂಗ್ಸ್ನಲ್ಲಿ 387 ಎಸೆತಗಳಲ್ಲಿ 269 ರನ್ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 587 ರನ್ಗಳನ್ನು ಕಲೆ ಹಾಕಿತ್ತು. ನಂತರ ದ್ವಿತೀಯ ಇನಿಂಗ್ಸ್ನಲ್ಲಿಯೂ ಶುಭಮನ್ ಗಿಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಅವರು 161 ರನ್ಗಳನ್ನು ಕಲೆ ಹಾಕಿದ್ದರು. ಇವರ ಜೊತೆಗೆ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಕೂಡ ಅರ್ಧಶತಕಗಳನ್ನು ಬಾರಿಸಿದ್ದರು. ಆ ಮೂಲಕ ಇಂಗ್ಲೆಂಡ್ ತಂಡಕ್ಕೆ 608 ರನ್ಗಳ ಗುರಿಯನ್ನು ನೀಡಲು ಸಾಧ್ಯವಾಗಿತ್ತು.
[ad_2]
Source link