[ad_1]
ಗುಬ್ಬಿ:
ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ತೆರೆದ ತಾಲ್ಲೂಕು ಆಡಳಿತ,ಗುಬ್ಬಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತವಾಗಿ ಇದನ್ನೇ ಸರಬರಾಜು ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ಬಿ ಆರತಿಯವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಯಾವುದೇ ಗ್ರಾಮ ದಲ್ಲಿ ಈ ರೀತಿ ದೂರು ಕಂಡುಬಂದಲ್ಲಿ
ತಾಲೂಕು ಕಚೇರಿಯಲ್ಲಿ ತೆರೆದಿರುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಸಹಾಯವಾಣಿ ಕೇಂದ್ರವನ್ನು ತೆರೆಯಲು ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಯಲ್ಲಿ ಸೂಚಿಸಿರುವಂತೆ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.
ಸಹಾಯವಾಣಿ ಸಂಖ್ಯೆ ತಾಲ್ಲೂಕು – 08131-222784, 08131-222248 ಈ ದೂರವಾಣಿ ಸಂಖ್ಯೆಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಾಗೂ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ಸಂಪರ್ಕಿಸ ಬಹುದಾಗಿದ್ದು, ಇದರ ಸದುಪಯೋಗವನ್ನು ಪಡೆಯಲು ತಾಲ್ಲೂಕಿನ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
[ad_2]
Source link