[ad_1]
ನವದೆಹಲಿ:
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದರು.
ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹಾಜರಿದ್ದರು.
[ad_2]
Source link