
ಧಾರವಾಡ: ಜಿಂಕೆ ಒಂದು ಕಾಡಿನಿಂದ ನಾಡಿಗೆ ಜನರ ಒದ್ದಾಡುತ್ತಿತ್ತು, ಅಂದ್ರೆ ಧಾರವಾಡದ ಸೋಮೇಶ್ವರ ದೇವಸ್ಥಾನ ಕೆರೆ ಒಂದರಲ್ಲಿ ಕಾಡಿನಿಂದ ನಾಡಿಗೆ ಬಂದ ಜಿಂಕೆ ಕೆರೆಯಲ್ಲಿ ಸಿಲುಕಿ ಒದ್ದಾಡುತ್ತಿತ್ತು… ಇದನ್ನು ನೋಡಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ವಿಷಯ ತಲುಪಿಸಿದ್ದಾರೆ. ಅನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಸೋಮಶೇಖರ್ ಅವರು ಕೆರೆಯಲ್ಲಿ ಸಿಲುಕಿಕೊಂಡಿದ್ದ ಜಿಂಕೆಯನ್ನು ಸುರಕ್ಷಿತವಾಗಿ ಹೊರತೆಗೆದು, ಮರಳು ಕಾಡಿಗೆ ಬಿಡಲು ಜಿಂಕೆಯನ್ನು ತೆಗೆದುಕೊಂಡು ಹೋಗಿದ್ದಾರೆ. ಧಾರವಾಡ ನಗರದ ಸೋಮೇಶ್ವರ ದೇವಸ್ಥಾನ ಬಳಿ ಇರುವ ಕೆರೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ..
