
ಧಾರವಾಡ: ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಒಂಬತ್ತನೇ ತರಗತಿಯ ವಿದ್ಯಾರ್ಥಿ ಎಂ. ವೈಭವ ಈತನು, “ಕಾರ್ಗಿಲ್ ದೇಶದ ಮುಕುಟಪ್ರಾಯವಾಗಿ ಕಂಗೊಳಿಸಿದ ಪ್ರದೇಶ. ಈ ಪ್ರದೇಶದ ಮೇಲೆ ವೈರಿ ಪಡೆಯ ದಾಳಿ ಅತ್ಯಂತ ಶೋಚನೀಯ. ಕಾರ್ಗಿಲ್ ಕದನದಲ್ಲಿ ಭಾರತೀಯ ಸೇನೆಯ ಕೆಚ್ಚೆದೆಯ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ. ದೇಶದ ಪ್ರತಿಯೊಬ್ಬರೂ ದೇಶದ ರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಅಂದಾಗ ಮಾತ್ರ ದೇಶ ಸುರಕ್ಷಿತವಾಗಿರಲು ಸಾಧ್ಯ” ಎಂದು ಅಭಿಪ್ರಾಯಪಟ್ಟನು.

ಕಾರ್ಯಕ್ರಮದಲ್ಲಿ ಕಾರ್ಗಿಲ್ ವಿಜಯೋತ್ಸವದ ಕುರಿತು ವಿಡಿಯೋವೊಂದನ್ನು ಪ್ರದರ್ಶಿಸಲಾಯಿತು. ಶಾಲೆಯ ಪ್ರಾಚಾರ್ಯರಾದ ಡಾ.ಅನಿತಾ ರೈ ಅವರು ಶಾಲೆಯ ಎನ್.ಸಿ.ಸಿ. ತಂಡದವರ ಜೊತೆಗೂಡಿ ಕಾರ್ಗಿಲ್ ವೀರ ಯೋಧರಿಗೆ ನಮನ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.