Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರನಿಗೆ ಕ್ಯಾನ್ಸರ್; ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು!

ಬೆಂಗಳೂರು, ಜುಲೈ 28: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮಿಲಿಂದ ಖರ್ಗೆಯವರು ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಮಿಲಿಂದ್ ಖರ್ಗೆ ಅವರನ್ನಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮಿಲಿಂದ ಖರ್ಗೆಯವರು ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ ನಿಂದ ಎಂಬಿಎ ಪದವಿಯನ್ನು ಮಲ್ಲಿಕಾರ್ಜುನ್ ಖರ್ಗೆ ಪುತ್ರ ಮಿಲಿಂದ್ ಖರ್ಗೆ ಪಡೆದಿದ್ದರು. ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಅವರು, ರಾಜಕೀಯದಿಂದ ದೂರವೇ ಉಳಿದಿದ್ದರು. ಅಲ್ಲದೇ ಸಾರ್ವಜನಿಕವಾಗಿಯೂ ಕಾಣಿಸಿಕೊಂಡಿಲ್ಲ.
ಕೆಲವು ದಿನಗಳಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲಿಂದ್ ಖರ್ಗೆ ಅವರ ಆರೋಗ್ಯವು ಈಗ ಹದಗೆಟ್ಟಿದೆ ಎಂದು ವರದಿಯಾಗಿದೆ. ಐಸಿಯುನಲ್ಲಿ ಇರುವಂತ ಮಲ್ಲಿಕಾರ್ಜುನ್ ಖರ್ಗೆ ಪುತ್ರ ಮಿಲಿಂದ್ ಖರ್ಗೆ ಅವರ ಸ್ಥಿತಿ ಈಗ ಗಂಭೀರ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇನ್ನೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.